ಬೆಂಗಳೂರು, ಮಾರ್ಚ್,11,2025 (www.justkannada.in): ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಸರ್ವೇ ನಂ.15 ರಲ್ಲಿನ 3.56 ಎಕರೆ ಪ್ರದೇಶದಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಅಧಿಕಾರಿಗಳು ಈಗಾಗಲೇ ಕ್ರಮಕೈಗೊಂಡಿದ್ದು, ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
ವಿಧಾನಸಭೆಯ ಅಧಿವೇಶನದಲ್ಲಿ ಸದಸ್ಯ ಎ.ಆರ್. ಕೃಷ್ಣಮೂರ್ತಿ ಅವರು ಗಮನ ಸೆಳೆಯುವ ಸೂಚನೆ ವೇಳೆಯಲ್ಲಿ ಪ್ರಸ್ತಾಪಿಸಿದಾಗ ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಉತ್ತರಿಸಿದರು.
Key words: Rights letter, poor families, Bastipura, DCM, D.K. Shivakumar
The post ಬಸ್ತಿಪುರ ಬಡ ಕುಟುಂಬಗಳಿಗೆ ಹಕ್ಕು ಪತ್ರ: ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ- ಡಿಸಿಎಂ ಡಿ.ಕೆ.ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.