18
Tuesday
March, 2025

A News 365Times Venture

ಕಾಡಾನೆ ದಾಳಿಗೆ ಮಹಿಳೆ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

Date:

ಬೆಂಗಳೂರು,ಮಾರ್ಚ್,17,2025 (www.justkannada.in):  ಹಾಸನದ ಬೇಲೂರಿನಲ್ಲಿ ಕಾಡಾನೆ ದಾಳಿಯಿಂದ  ಮೃತಪಟ್ಟ ಮಹಿಳೆಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದರು.

ವಿಧಾನಪರಿಷತ್ ಕಲಾಪದಲ್ಲಿ ಇಂದು ಈ ಬಗ್ಗೆ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಈಶ್ವರ್ ಖಂಡ್ರೆ, ಆನೆ ಮತ್ತು ಮಾನವ ಸಂಘರ್ಷ ಇಂದು, ನಿನ್ನೆಯದಲ್ಲ. ಇದು ಹಲವು ವರ್ಷಗಳಿಂದ ನಡೆಯುತ್ತಿರುವಂತಹ ಸಂಘರ್ಷ. ಕೋವಿಡ್ ಬಳಿಕ ಹಾಸನದಲ್ಲಿ 4 ರಿಂದ 5 ಜನರು ಆನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ನಾವು ಪರಿಹಾರ ಕೊಡಬಹುದೇ ಹೊರತು, ಜೀವ ವಾಪಾಸ್ ತರಲು ಸಾಧ್ಯವಿಲ್ಲ ಎಂದರು.

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ಕ್ರಮ ಕೈಗೊಳ್ಳುತ್ತೇವೆ. ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು,  ಹಾಸನದ ಬೇಲೂರಿನಲ್ಲಿ ಕಾಡಾನೆ ದಾಳಿಯಿಂದ ಮೃತರಾದ ಮಹಿಳೆ ಕುಟುಂಬಕ್ಕೆ 20 ಲಕ್ಷ ರೂ> ಪರಿಹಾರ  ನೀಡುತ್ತೇವೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

Key words: Woman, dies, elephant, attack, Minister, Ishwar Khandre, compensation

The post ಕಾಡಾನೆ ದಾಳಿಗೆ ಮಹಿಳೆ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ-ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕಿವಿಮಾತು

ಬೆಂಗಳೂರು,ಮಾರ್ಚ್,17,2025 (www.justkannada.in): ವ್ಯಕ್ತಿ ಪೂಜೆಯನ್ನು ಬಿಟ್ಟು ಪಕ್ಷ ಪೂಜೆ ಮಾಡಬೇಕು...

ഗസയില്‍ വ്യോമാക്രമണം പുനരാരംഭിച്ച് ഇസ്രഈല്‍; 100ലേറെ മരണം

ഗസ: ഒരിടവേളയ്ക്ക് ശേഷം ഗസയില്‍ വീണ്ടും ആക്രമണം പുനരാരംഭിച്ച് ഇസ്രഈല്‍. വെടിനിര്‍ത്തല്‍...

மோடியின் நேர்காணலில் ட்ரம்ப் குறித்த பேச்சு… வீடியோவை பகிர்ந்த ட்ரம்ப்; நன்றி பாராட்டிய மோடி

இந்திய பிரதமர் மோடியிடம் நேர்காணல் செய்த லெக்ஸ் ஃப்ரிட்மேன் பாட்காஸ்டை நிகழ்ச்சியை...

Gold Rates Today: అమ్మబాబోయ్.. మళ్లీ భారీగా పెరిగిన బంగారం ధరలు.. నేడు తులం ఎంతంటే?

నిన్నటి వరకు తగ్గుతూ వచ్చిన బంగారం ధరలు నేడు షాకిచ్చాయి. ఈ...