2
Sunday
February, 2025

A News 365Times Venture

ಅಟ್ರಾಸಿಟಿ ಪ್ರಕರಣಗಳಲ್ಲಿ ದೌರ್ಜನ್ಯಕ್ಕೀಡಾಗುವವರಿಗೆ ನ್ಯಾಯ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಿ-ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜನವರಿ,28,2025 (www.justkannada.in):  ಅಟ್ರಾಸಿಟಿ ಪ್ರಕರಣಗಳಲ್ಲಿ ಸರ್ಕಾರಿ ಪ್ರಾಸಿಕ್ಯೂಟರ್‌ ಗಳು ಸರಿಯಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಟ್ರಾಸಿಟಿ ಪ್ರಕರಣ ಸಂಬಂಧ ದೌರ್ಜನ್ಯ ಮಾಡಿದವರು ಸುಲಭವಾಗಿ ಜಾಮೀನು ಪಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಒದಗಿಸುವುದು ಎಲ್ಲರ ಜವಾಬ್ದಾರಿ. ದೌರ್ಜನ್ಯ ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿಯನ್ನು ನಿಗದಿತ ಅವಧಿಯ ಒಳಗಾಗಿ ಸಲ್ಲಿಸಬೇಕು ಎಂದು ತಿಳಿಸಿದರು.

ಬ್ಯಾಕ್‌ಲಾಗ್‌, ನೇಮಕಾತಿ ಮತ್ತು ಮುಂಬಡ್ತಿ ಪ್ರಕರಣಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಈ ಕುರಿತು ಇಲಾಖೆವಾರು ಸಭೆ ನಡೆಸಲು ಮುಖ್ಯಕಾರ‍್ಯದರ್ಶಿಯವರಿಗೆ ಸೂಚನೆ. ದೇವದಾಸಿ ಪದ್ದತಿ ಯಾವುದೇ ಜಿಲ್ಲೆಗಳಲ್ಲಿ ನಡೆದರೆ ಅದಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ವರಿಷ್ಠಾಧಿಕಾರಿ ಅವರೇ ನೇರ ಹೊಣೆ. ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವುದು ಜಿಲ್ಲಾಡಳಿತದ ಜವಾಬ್ದಾರಿ. ಈ ಕುರಿತು ಯಾವುದೇ ದೂರಿಗೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು

ಅರಣ್ಯ ಹಕ್ಕು ಸಮಿತಿ ನಿಗದಿತವಾಗಿ ಸಭೆಗಳನ್ನು ನಡೆಸಿ, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು. 3430 ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಲು ಇನ್ನೂ ಬಾಕಿಯಿದ್ದು, ಇದನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಹಕ್ಕುಪತ್ರ ನೀಡಿದ ಬಳಿಕ ಪಹಣಿಯಲ್ಲಿ‌ ಅವರ ಹೆಸರು ನಮೂದಿಸುವ ಕಾರ್ಯ ತ್ವರಿತಗೊಳಿಸಬೇಕು. ಕಂದಾಯ ಇಲಾಖೆ ಅಧಿಕಾರಿಗಳು ಇದನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಎಸ್ಸಿ/ಎಸ್ಟಿ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. 60ದಿನಗಳ ಒಳಗಾಗಿ ಆರೋಪಪಟ್ಟಿ ದಾಖಲಿಸಬೇಕು. ಇನ್ನೂ 665 ಪ್ರಕರಣಗಳು ತನಿಖೆಗೆ ಬಾಕಿಯಿದ್ದು, ಇದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನ್ಯಾಯಾಲಯಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆಯಾಗುವುದನ್ನು ಒಪ್ಪಲು ಸಾಧ್ಯವಿಲ್ಲ.

ಪ್ರತಿ ಜಿಲ್ಲೆಯಲ್ಲಿ ಡಿಸಿಆರ್‌ಇ ಕೋಶವನ್ನು‌ ಸ್ಥಾಪಿಸುವ ಕುರಿತು ಈಗಾಗಲೇ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.  ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಬೇಕು. ಪ್ರಾಸಿಕ್ಯೂಶನ್ ಸಹ ಪರಿಶೀಲನೆ ನಡೆಸಬೇಕು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಈ ಸಭೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗುವುದು ಎಂದರು.

ಇನ್ನು ಮೃತಪಟ್ಟ ಪ್ರಕರಣಗಳಲ್ಲಿ ಅನುಕಂಪ ಆಧಾರದ ಉದ್ಯೋಗಕ್ಕಾಗಿ ಮೃತಪಟ್ಟ ದಿನಾಂಕದಿಂದ 3 ವರ್ಷದ ಒಳಗೆ, ಅಪ್ರಾಪ್ತ ವಯಸ್ಸಿನ ಮಕ್ಕಳು 18 ವರ್ಷಗಳನ್ನು ಪೂರೈಸತಕ್ಕದ್ದು, ಎಂಬ ಮಿತಿಯನ್ನು ತೆಗೆದು ಹಾಕುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಅಂತಹ ಪ್ರಮಾಣ ಪತ್ರ ನೀಡುವ ಅಧಿಕಾರಿಯನ್ನು ಸಹ ಆರೋಪಿಯನ್ನಾಗಿ ಮಾಡಲಾಗುತ್ತದೆ. ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

Key words: provide, justice, victims, atrocity cases, CM Siddaramaiah

The post ಅಟ್ರಾಸಿಟಿ ಪ್ರಕರಣಗಳಲ್ಲಿ ದೌರ್ಜನ್ಯಕ್ಕೀಡಾಗುವವರಿಗೆ ನ್ಯಾಯ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಿ-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Duddilla Sridhar Babu : కేంద్ర బడ్జెట్‌లో తెలంగాణాకు తీరని అన్యాయం

Duddilla Sridhar Babu : నిర్మలా సీతారామన్ ప్రవేశపెట్టిన కేంద్ర బడ్జెట్‌లో...

ಪ್ರತಿಗಾಮಿ ಬಜೆಟ್ ಮೂಲಕ ಬಿಜೆಪಿ ಸರ್ಕಾರ ಇಡೀ ದೇಶಕ್ಕೆ ಮಂಕುಬೂದಿ ಎರಚಿದೆ-ಹೆಚ್.ಎ ವೆಂಕಟೇಶ್

ಮೈಸೂರು,ಫೆಬ್ರವರಿ,1,2025 (www.justkannada.in): ಇಡೀ ವಿಶ್ವ ಕೃತಕ ಬುದ್ಧಿಮತ್ತೆಯ ಸ್ಪರ್ಧಾತ್ಮಕ ಜಗತ್ತಿನ...

വെടിയുണ്ടകളുടെ വേഗതയുള്ള ട്രംപിന്റെ നടപടികള്‍ യു.എസ് ഭരണഘടനയ്ക്ക് നേരെയുള്ള മിന്നലാക്രമണം: നിയമവിദഗ്ധര്‍

ന്യൂയോര്‍ക്ക്: ഭരണത്തിലേറിയതിന് പിന്നാലെ യു.എസ് പ്രസിഡന്റ് നടത്തുന്ന നീക്കങ്ങള്‍ അമേരിക്കന്‍ ഭരണഘടനയ്ക്ക്...

Shock கொடுத்த Vijay, warning கொடுக்கும் EPS! | Elangovan Explains | Vikatan

இன்றைய இம்பர்ஃபெக்ட் ஷோ ஃவில், 'Budget 2025' தாக்கல் செய்யப்பட்டுள்ளது. அதில் வருமான...