ಬೆಂಗಳೂರು,ಜನವರಿ,29,2025 (www.justkannada.in): ಹೊಸ ತಂತ್ರಾಂಶ ಅಳವಡಿಕೆ ಹಿನ್ನೆಲೆಯಲ್ಲಿ ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ ಬಿಲ್ಲಿಂಗ್ ಇನ್ನಿತರ ಸೇವೆ 3 ದಿನ ಅಲಭ್ಯವಾಗಲಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ (ನಾನ್ ಆರ್ಎಪಿಡಿಆರ್ ಪಿ) ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ದಿನಾಂಕ 30.01.2025 ರಿಂದ 01.02.2025 (3 ದಿನ)ರ ವರೆಗೆ ಬಿಲ್ಲಿಂಗ್, ಹೊಸ ಸಂಪರ್ಕ ಹಾಗೂ ತಂತ್ರಾಂಶ ಆಧಾರಿತ ಸೇವೆಗಳು ಲಭ್ಯವಿರುವುದಿಲ್ಲ. ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ಬೆಸ್ಕಾಂ ವ್ಯಾಪ್ತಿಯ ಉಳಿದ 7 ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಲ್ಲಿ ಕಂದಾಯ ಸಂಗ್ರಹ ಹೊರತುಪಡಿಸಿ ತಂತ್ರಾಂಶ ಆಧಾರಿತ ಸೇವೆಗಳಲ್ಲಿ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Key words: Billing, other services, rural areas, BESCOM , 3 days
The post ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ ಬಿಲ್ಲಿಂಗ್ ಇನ್ನಿತರ ಸೇವೆ 3 ದಿನ ಅಲಭ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.