21
Friday
February, 2025

A News 365Times Venture

ಸಾಧನೆಗೆ ಗುರಿ ಮುಖ್ಯ: ಇಂದಿನಿಂದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ- ಎಸ್ಪಿ ಎನ್. ವಿಷ್ಣುವರ್ಧನ

Date:

ಮೈಸೂರು,ಜನವರಿ,29,2025 (www.justkannada.in):  ಸಾಧನೆಗೆ ಗುರಿ ಮುಖ್ಯ.  ಹೀಗಾಗಿ ಇಂದಿನಿಂದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ. ಬಳಿಕ ಗುರಿಯ ಕಡೆ ನಿರಂತರ ಗಮನ ಹರಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ಅವರು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಏರ್ಪಡಿಸಲಾಗಿದ್ದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಹುದ್ದೆಗಿಂತಲೂ ಮಾನವೀಯ ಮೌಲ್ಯ ಮುಖ್ಯ. ಹೀಗಾಗಿ ಜೀವನದಲ್ಲಿ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ ಜೊತೆಗೆ ಶಿಸ್ತು, ಹಿರಿಯ ಮೇಲೆ ಗೌರವ, ಪ್ರೀತಿ ಇಟ್ಟುಕೊಳ್ಳಬೇಕು ಆವಾಗಲೇ ಜೀವನದಲ್ಲಿ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ನಿಮ್ಮ ಬೌದ್ಧಿಕ ಬುದ್ಧಿ ಶಕ್ತಿ ಬಲವಾಗಿರುವುದರಿಂದ ಈ ನಿಟ್ಟಿನಲ್ಲಿ ನೀವು ಯಾವುದೇ ಹಾದಿಯನ್ನು ಸುಗಮವಾಗಿ ಸಾಧಿಸಬಹುದು. ಬ್ಯಾಂಕಿಂಗ್, ಯುಪಿಎಸ್ಸಿ, ಐಎಎಸ್ ಐಎಫ್ಎಸ್, ಕೆಎಎಸ್ ಸೇರಿದಂತೆ ಎಲ್ಲಾ ಪರೀಕ್ಷೆ ತೆಗೆದುಕೊಳ್ಳಿ ಪ್ರಯತ್ನಂ ಸರ್ವ ಸಾಧನಂ ಎನ್ನುವಂತೆ ಎಂದಾದರೂ ಪ್ರಯತ್ನಕ್ಕೆ ಫಲ ಸಿಕ್ಕೆ ಸಿಗುತ್ತದೆ ಎಂದು ಕಿವಿಮಾತು ಹೇಳಿದರು.

ಶಾಲೆಯಿಂದಲೇ ನಾನು ಗುರಿ ನಿಗದಿಪಡಿಸಿಕೊಂಡಿದ್ದೆ. ಅಂದಿನಿಂದಲೇ ಸತತ ಪ್ರಯತ್ನಿಸಿದೆ. ನಮ್ಮ ತಂದೆ ಕೂಡ ಪೊಲೀಸ್ ಇಲಾಖೆಯ ಅಧಿಕಾರಿಗಳಾಗಿದ್ದರು ಅವರೇ ನನಗೆ ಮಾದರಿ. ನಾನು ನನ್ನ ಗುರಿ ಕಡೆ ಗಮನ ಹರಿಸಿದೆ. ಪೊಲೀಸ್ ಇಲಾಖೆಗೆ ಸೇರಿದೆ ಎಂದು ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿಕೊಂಡರು. ಹುದ್ದೆ ಸೇರಿದ ಮೇಲೆ ಪೋಷಕರನ್ನು ಮರೆಯಬಾರದು. ಸಾರ್ವಜನಿಕ ಸೇವೆಯೆ ನಮ್ಮ ಗುರಿ ಎನ್ನುವ ಅಂಶವನ್ನು ಮರೆಯಬಾರದು ಎಂದು ಹೇಳಿದರು.

ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಬೌದ್ಧಿಕ ಸಾಮರ್ಥ್ಯವನ್ನು ಗಟ್ಟಿಕೊಳಿಸಿ ನಮ್ಮ ಕೆಲಸಗಳನ್ನು ಚುರುಕುಗೊಳಿಸಬೇಕು ಎಂದು ಹೇಳಿದರು.

ಕುಲಸಚಿವ ಪ್ರೊ.ಕೆ. ಬಿ.ಪ್ರವೀಣ ಅವರು ಮಾತನಾಡಿ ಬ್ಯಾಂಕಿಂಗ್ ಹುದ್ದೆಗಳ ತರಬೇತಿಗೆ ಬಂದಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ತಮ್ಮ ಗುರಿ ಸ್ಪಷ್ಟಪಡಿಸಿಕೊಂಡು ಆ ಹಾದಿಯತ್ತ ಗಮನ ಹರಿಸಬೇಕು. ನಿರಂತರ ಪರಿಶ್ರಮ ನಿಮ್ಮನ್ನು ಗೆಲುವಿನ ದಡ ಸೇರಿಸಲಿದೆ. ವಿದ್ಯಾರ್ಥಿಗಳಲ್ಲಿ ಛಲ ಮತ್ತು ಗುರಿಯಿರಬೇಕು. ಆ ಗುರಿ ದೊಡ್ಡದಾಗಿರಲಿ ಎಂದರು.

ತರಬೇತಿ ಪಡೆಯಲು ಬಂದಿರುವ ನಿಮಗೆ ವಿವಿಯು ಎಲ್ಲಾ ಸಹಕಾರ ನೀಡಲಿದೆ. ಇಲ್ಲಿರುವ ಗ್ರಂಥಾಲಯ ಹಾಗೂ ವಿವಿಧ ವಿಭಾಗಗಳ ಪ್ರಾಧ್ಯಾಪಕರ ನೆರೆವು ಪಡೆದುಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಧ್ಯಯನ ಕೇಂದ್ರದ ಡೀನ್ ಪ್ರೊ. ರಾಮನಾಥಂ ನಾಯ್ಡು, ಹಣಕಾಸು ಅಧಿಕಾರಿಗಳಾದ ಪ್ರೊ. ನಿರಂಜನ್ ರಾಜ್, ಸಂಯೋಜನಾಧಿಕಾರಿಗಳಾದ, ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್ ಹೊನ್ನೂರ್, ಗಣೇಶ್ ಕೆ. ಜಿ ಕೊಪ್ಪಲ್. ಅವರು ಉಪಸ್ಥಿತರಿದ್ದರು.

Key words: Goals, important, success, mysore, KSOU, SP,  N. Vishnuvardhana

The post ಸಾಧನೆಗೆ ಗುರಿ ಮುಖ್ಯ: ಇಂದಿನಿಂದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ- ಎಸ್ಪಿ ಎನ್. ವಿಷ್ಣುವರ್ಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

`மொழி' குறித்த ஜெக்தீப் தன்கரின் பேச்சு: `பூனைக்குட்டி வெளியே வந்துவிட்டது' – கனிமொழி ட்வீட்

தமிழ்நாட்டின் பள்ளிகளில் மத்திய அரசு கொண்டுவந்த புதிய கல்விக் கொள்கையின்படி, மும்மொழிக்...

Vallabhaneni Vamsi Case: వంశీతో ఆయన భార్య పంకజ శ్రీ, పేర్నినాని ములాఖత్.. జైలులో ఇబ్బంది పడుతున్నారు..!

Vallabhaneni Vamsi Case: విజయవాడ జైలులో ఉన్న వల్లభనేని వంశీని ములాఖత్‌లో...

ಪಿಜಿ ವೈದ್ಯಕೀಯ: ಸ್ಟ್ರೇ ವೇಕೆನ್ಸಿ ಸುತ್ತಿನ  ಸೀಟು ಹಂಚಿಕೆ: ತಮ್ಮ ಆಯ್ಕೆ ದಾಖಲಿಸಲು  ಫೆ.24 ಕೊನೆ ದಿನ

ಬೆಂಗಳೂರು,ಫೆಬ್ರವರಿ,21,2025 (www.justkannada.in): 2024ನೇ ಸಾಲಿನ  ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ...

സി.പി.ഐ.എം കോട്ടയം ജില്ലാ സെക്രട്ടറി എ.വി റസൽ അന്തരിച്ചു

കോട്ടയം: സി.പി.ഐ.എം കോട്ടയം ജില്ലാ സെക്രട്ടറി എ.വി റസൽ അന്തരിച്ചു. അർബുദ...