25
Tuesday
February, 2025

A News 365Times Venture

ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ದ ಬಲಿಷ್ಠ ಕಾಯ್ದೆ ಜಾರಿ:  ಸಿಎಂ ಸಭೆಯಲ್ಲಿ ನಿರ್ಧಾರ

Date:

ಬೆಂಗಳೂರು,ಜನವರಿ,30,2025 (www.justkannada.in): ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಇಂದು ಉನ್ನತ ಮಟ್ಟದ ಸಭೆ ನಡೆಯಿತು.

ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಈ ಕೆಳಕಂಡಂತಿದೆ.

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧಾರ.  ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ.

ಕಾಯ್ದೆ ಸಂಪೂರ್ಣ ಸಂವಿಧಾನಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು.

ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲಾಗುತ್ತಿದೆ.

ಕಾಯ್ದೆಯಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಒಂಬುಡ್ಸ್‌ಮೆನ್‌ ಗಳ ನೇಮಕ ಮಾಡಲಾಗುವುದು. ಅಮಾನವೀಯವಾಗಿ ಬಲವಂತದ ಸಾಲ ವಸೂಲಾತಿ ಮಾಡುವವರಿಗೆ ಜಾಮೀನುರಹಿತ ಪ್ರಕರಣ ದಾಖಲು ಸೇರಿದಂತೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶ ಸಿಗಲಿದೆ.

ನೋಂದಣಿಯಾಗದ ಲೇವಾದೇವಿಗಾರರ ಕಿರುಕುಳವನ್ನು ತಪ್ಪಿಸಲು ಕಠಿಣ ಕಾನೂನು ಜಾರಿ ಮಾಡಲಾಗುತ್ತಿದೆ.

ಪ್ರಸ್ತುತವಿರುವ ಕಾನೂನಿನಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ನಿಯಂತ್ರಿಸಲು ಹಲವು ಅವಕಾಶಗಳಿದ್ದು, ಅದನ್ನು ಯಾಕೆ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ದೂರು ದಾಖಲು ಮಾಡುವ ತನಕ ಕಾಯದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು.

Key words: CM, meeting, implement, law, against, microfinance

The post ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ದ ಬಲಿಷ್ಠ ಕಾಯ್ದೆ ಜಾರಿ:  ಸಿಎಂ ಸಭೆಯಲ್ಲಿ ನಿರ್ಧಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

KTR: కాంగ్రెస్ హామీలు ఇచ్చి అమలు చేయకుండా మోసం చేసింది..

తెలంగాణ భ‌వ‌న్‌లో స్టేష‌న్ ఘ‌న్‌పూర్‌కు చెందిన మాజీ జ‌డ్పిటీసీ కీర్తి వెంక‌టేశ్వర్లు,...

ಶಿವರಾತ್ರಿ ಹಬ್ಬಕ್ಕೆ ಮೈಸೂರಿನ ಅರಮನೆಯಲ್ಲಿ ಸಿದ್ದತೆ: ಚಿನ್ನದ ಕೊಳಗ ಹಸ್ತಾಂತರ

ಮೈಸೂರು,ಫೆಬ್ರವರಿ,25,2025 (www.justkannada.in):  ನಾಳೆ ನಾಡಿನೆಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮವಾಗಿದ್ದು, ಮೈಸೂರು...

മുദ്രാവാക്യം വിളിച്ചു; അതിഷി ഉൾപ്പെടെ 12 ആം ആദ്മി എം.എൽ.എമാരെ ഒരു ദിവസത്തേക്ക് സഭയിൽ നിന്ന് പുറത്താക്കി ദൽഹി സ്പീക്കർ

ന്യൂദൽഹി: ലെഫ്റ്റനന്റ് ഗവർണർ വി. കെ. സക്‌സേനയുടെ പ്രസംഗത്തിനിടെ മുദ്രാവാക്യം വിളിച്ചതിന്...

டெல்லி முதல்வர் அலுவலகத்தில் அம்பேத்கர், பகத் சிங் புகைப்படங்கள் அகற்றமா? – ரேகா குப்தா விளக்கம்!

டெல்லி முதல்வர் அலுவலகத்திலிருந்து பகத் சிங் மற்றும் அம்பேத்கரின் புகைப்படங்களை அகற்றியதாக...