ಶಿವಮೊಗ್ಗ,ಜನವರಿ,31,2025 (www.justkannada.in): ಶಾಸಕ ಜನಾರ್ದನ ರೆಡ್ಡಿ ವಿರುದ್ದ ಮುನಿಸಿಕೊಂಡು ಬಿಜೆಪಿ ನಾಯಕರ ವಿರುದ್ದ ಅಸಮಾಧಾನಗೊಂಡಿರುವ ಮಾಜಿ ಸಚಿವ ಶ್ರೀರಾಮುಲುರನ್ನು ತೆರೆಮರೆಯಲ್ಲಿ ಕಾಂಗ್ರೆಸ್ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂಬ ಸುದ್ದಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ ಜನರ ನಂಬಿಕೆ ಉಳಿಸಿಕೊಂಡು ಹೋಗುವುದು ರಾಜಕೀಯ. ತಮ್ಮಲ್ಲಿರುವ ಒಳ ಜಗಳ ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಬಿಜೆಪಿ ಆರೋಪ ಮಾಡುತ್ತಿದೆ ಎಂದು ಟಾಂಗ್ ಕೊಟ್ಟರು.
ಜನರು ಬಿಜೆಪಿಯನ್ನ ವಿಪಕ್ಷದಲ್ಲಿ ಕೂರಿಸಿದ್ದಾರೆ. ಬಿಜೆಪಿಗೆ ಅಧಿಕಾರ ನೀಡಿದಾಗ ಅನುಭವ ಇರಲಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.
Key words: Congress, politics, Shriramulu, DCM, DK Shivakumar
The post ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.