ಬೆಂಗಳೂರು, ಜ.೩೧, ೨೦೨೫ : ಫ್ರೀಡಂ ಪಾರ್ಕ್ ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯರ್ತೆಯರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಟ್ಟಹಾಸ ಮೆರೆದಿದ್ದು, ಪೊಲೀಸರ ಮೂಲಕ ಟೆಂಟ್ ಕಿತ್ತುಹಾಕಿಸಿ ಬಲವಂತವಾಗಿ ಪ್ರತಿಭಟನೆ ಅಂತ್ಯಗೊಳಿಸುವ ಮೂಲಕ ಹಿಟ್ಲರ್ ಧೋರಣೆ ತೋರಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು ಹೇಳಿದಿಷ್ಟು..
ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ, ಚುನಾವಣೆ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಟ್ಟ ಆಶ್ವಾಸನೆ ಈಡೇರಿಸುವುದಕ್ಕಂತೂ ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲ. ಕೊರೆಯುವ ಚಳಿಯನ್ನೂ ಲೆಕ್ಕಿಸದೆ ನಾಲ್ಕು ದಿನದಿಂದ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿರುವ ಮಹಿಳೆಯರ ಬಳಿ ಹೋಗಿ ಕನಿಷ್ಠ ಪಕ್ಷ ಅವರನ್ನ ಸಮಾಧಾನ ಪಡಿಸುವ ಸೌಜನ್ಯವೂ ನಿಮ್ಮ ಸರ್ಕಾರಕ್ಕೆ ಇಲ್ಲ. ಈಗ ಅವರ ಶಾಂತಿಯುತ ಪ್ರತಿಭಟನೆಗೂ ಅಡ್ಡಿಪಡಿಸುವುದು ಯಾವ ನ್ಯಾಯ?
ತಮ್ಮ ನಾಯಕ ರಾಹುಲ್ ಗಾಂಧಿ ಅವರು ಹೋಗಿಬಂದಲ್ಲೆಲ್ಲ ತೋರಿಸುವ ಸಂವಿಧಾನದ ಪುಸ್ತಕದಲ್ಲಿ ಸಾಮಾನ್ಯ ನಾಗರಿಕರಿಗೆ ಪ್ರತಿಭಟನೆ ಮಾಡುವ ಹಕ್ಕಿಲ್ವಾ? ಅಥವಾ ನಮ್ಮ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಏನಾದರೂ ಇದೆಯಾ?
ನಿಮ್ಮ ಈ ಹಿಟ್ಲರ್ ಧೋರಣೆ ಜಾಸ್ತಿ ದಿನ ನಡೆಯುವುದಿಲ್ಲ. ನಿಮ್ಮ ಕಾಂಗ್ರೆಸ್ ಸರ್ಕಾರದ ವಿರುದ್ಧ ಕನ್ನಡಿಗರು ತಿರುಗಿ ಬೀಳುವ ದಿನ ಬಹಳ ದೂರವಿಲ್ಲ.
key words: Police obstruct, Anganwadi workers’, protest, R. Ashok’s anger.
The post ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಪೊಲೀಸರ ಅಡ್ಡಿ : ಸರಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.