15
Saturday
March, 2025

A News 365Times Venture

ಚುನಾವಣಾ ತೀರ್ಪನ್ನು ಸ್ವೀಕರಿಸುತ್ತೇವೆ: ಬಿಜೆಪಿಗೆ ಅಭಿನಂದನೆ ಸಲ್ಲಿಸಿದ ಅರವಿಂದ ಕೇಜ್ರಿವಾಲ್

Date:

ನವದೆಹಲಿ, ನವೆಂಬರ್,8,2025 (www.justkannada.in): ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ  ಸೋಲನುಭವಿಸಿದ್ದು ದೆಹಲಿ ಜನತೆ ನೀಡಿದ ತೀರ್ಪನ್ನು ಸ್ವೀಕರಿಸುತ್ತೇವೆ ಎಂದು ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ ಅರವಿಂದ ಕೇಜ್ರಿವಾಲ್,  ದೆಹಲಿ ಜನತೆ ನೀಡಿರುವ ಚುನಾವಣಾ ತೀರ್ಪನ್ನು ನಾವು ವಿನಮ್ರವಾಗಿ ಸ್ವೀಕರಿಸುತ್ತೇವೆ. ನಮಗೆ ಸೋಲಿನ ನಿರೀಕ್ಷೆ ಇರಲಿಲ್ಲ. ಆದರೂ ಪ್ರಜಾಪ್ರಭುತ್ವದಲ್ಲಿ ಜನತೆ ನೀಡುವ ತೀರ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಈ ಸೋಲಿನ ಪರಾಮರ್ಶೆ ನಡೆಸಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಕಟ್ಟುವಲ್ಲಿ ನಾವು ನಿರತರಾಗುತ್ತೇವೆ ಎಂದಿದ್ದಾರೆ.

ಹಾಗೆಯೇ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲು ಸಜ್ಜಾಗಿರುವ ಬಿಜೆಪಿಗೆ ಅಭಿನಂದನೆ ಸಲ್ಲಿಸಿರುವ ಅರವಿಂದ ಕೇಜ್ರಿವಾಲ್, ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಬಿಜೆಪಿ ದೆಹಲಿ ಜನರ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡಲಿ ಎಂದು ನಿರೀಕ್ಷೆ ಇಟ್ಟುಕೊಂಡಿದ್ದೇನೆ. ಅದರಂತೆ ಆಪ್‌ ಕೂಡ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡಲಿದೆ ಎಂದಿದ್ದಾರೆ.

“ನಾವು ಕಳೆದ 10 ವರ್ಷಗಳಿಂದ ದೆಹಲಿಯಲ್ಲಿ ಉತ್ತಮ ಆಡಳಿತ ನೀಡಿದ್ದೇವು. ದೆಹಲಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಾವು ಮಾಡಿದ್ದೇವು. ಪ್ರಮುಖವಾಗಿ ಸರ್ಕಾರಿ ಶಾಲೆಗಳ ಸ್ಥಿತಿಯನ್ನು ಬದಲಾಯಿಸುವಲ್ಲಿ ನಾವು ತುಂಬಾ ಶ್ರಮಿಸಿದ್ದೇವು. ಆದರೆ ದೆಹಲಿ ಮತದಾರರು ಈ ಬಾರಿ ಬಿಜೆಪಿ ಪರವಾಗಿ ನಿರ್ಣಯ ಮಾಡಿದ್ದಾರೆ. ನಾವು ಈ ಜನಾದೇಶಕ್ಕೆ ತಲೆಬಾಗುತ್ತೇವೆ ಎಂದು ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

Key words: Delhi, Assembly Elections, Arvind Kejriwal, congratulates, BJP

The post ಚುನಾವಣಾ ತೀರ್ಪನ್ನು ಸ್ವೀಕರಿಸುತ್ತೇವೆ: ಬಿಜೆಪಿಗೆ ಅಭಿನಂದನೆ ಸಲ್ಲಿಸಿದ ಅರವಿಂದ ಕೇಜ್ರಿವಾಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಾ.22ಕ್ಕೆ ಕ್ಷೇತ್ರ ಪುನರ್‌ ವಿಂಗಡನೆ ವಿರೋಧಿ ಸಭೆ:  ತಮಿಳುನಾಡು ಸಿಎಂ ಸ್ಟಾಲಿನ್‌ ಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು,ಮಾರ್ಚ್,13,2025 (www.justkannada.in):  ಮಾರ್ಚ್ 22ಕ್ಕೆ ನಡೆಯುವ ಕ್ಷೇತ್ರ ಪುನರ್‌ ವಿಂಗಡನೆ...

ഫലസ്തീന്‍ അനുകൂല വിദ്യാര്‍ത്ഥി മഹ്‌മൂദ് ഖലീലിനെ മോചിപ്പിക്കണം; ട്രംപ് ടവറില്‍ പ്രതിഷേധിച്ച് ജൂത സംഘടന

ന്യൂയോര്‍ക്ക്: കൊളംബിയ സര്‍വകലാശയില്‍ ഫലസ്തീന്‍ അനുകൂല പ്രക്ഷോഭങ്ങള്‍ക്ക് നേതൃത്വം കൊടുത്ത മഹ്‌മൂദ്...

Pawan Kalyan: `ஏன் தமிழ் படங்கள் இந்தியில் டப் செய்கிறார்கள்?' – சர்ச்சையைக் கிளப்பும் பவன் கல்யாண்

தமிழகத்தில் தற்போது பரபரப்பாக பேசப்பட்டுக் கொண்டிருக்கும் இந்தி திணிப்பு விவகாரம் குறித்து...

Trump: ఉక్రేనియన్ సైనికుల ప్రాణాలను కాపాడమని విజ్ఞప్తి చేసిన ట్రంప్.. పుతిన్ ఏమన్నారంటే?

రష్యా-ఉక్రెయిన్ దేశాల మధ్య జరుగుతున్న పరస్పర దాడులు రెండో ప్రపంచ యుద్ధాన్ని...