ಬೆಂಗಳೂರು, ಫೆಬ್ರವರಿ 15,2025 (www.justkannada.in): ನಾನು ನಾಲ್ಕೈದು ವರ್ಷ ಬದುಕಿರುತ್ತೇನೆ. ಅಲ್ಲಿವರೆಗೂ ನೀರಾವರಿಗಾಗಿ ನಾನು ಹೋರಾಟ ಮಾಡುತ್ತೇನೆ. ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ ದೇವೇಗೌಡರು, ಮಹದಾಯಿ ನದಿ ನೀರಿಗಾಗಿ ನಾವೆಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿ ಎಲ್ಲರೂ ಹೋರಾಟ ಮಾಡಬೇಕು. ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಲು ಶಕ್ತಿಮೀರಿ ಹೋರಾಟ ಮಾಡೋಣ ಎಂದು ಕರೆ ನೀಡಿದರು.
ಮಹದಾಯಿ ಯೋಜನೆ ವಿವಾದ ನ್ಯಾಯಾಲಯದಲ್ಲಿದೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡಲು ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಅದಕ್ಕೆ ನಮ್ಮ ಸರ್ಕಾರ ಪ್ರತಿಭಟನೆ ಮಾಡಿ ಅರ್ಜಿ ಹಾಕಿದೆ. ವಿವಾದ ಕೋರ್ಟ್ನಲ್ಲಿರುವಾಗ ಪ್ರಧಾನಿ ಮೋದಿ ಏನು ಮಾಡುತ್ತಾರೆ. ಹಾಗಾಗಿ ನಮ್ಮವರು ಕೋರ್ಟ್ನಲ್ಲಿ ಪ್ರಬಲ ವಾದ ಮಾಡಬೇಕು. ನಾವೆಲ್ಲ ಪಕ್ಷಭೇದ ಮರೆತು ಹೋರಾಟ ಮಾಡಬೇಕು ಎಂದು ಹೆಚ್ ಡಿಡಿ ಹೇಳಿದರು.
ಕರ್ನಾಟಕಕ್ಕೆ25 ಟಿಎಂಸಿ ನೀರು ಕೊಡಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದೇನೆ. ಮಹದಾಯಿ ಯೋಜನೆಗೆ ಗೋವಾ ಮತ್ತು ಪರಿಸರದ ಸಮಸ್ಯೆ ಇದೆ. ಅದಕ್ಕೆ ಕೊಡಲು ಆಗಲ್ಲ ಅಂತ ಹೇಳಿದ್ದಾರೆ. ಕುಡಿಯುವ ನೀರಿಗಾಗಿ ನಮ್ಮ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಹೋರಾಟ ಮಾಡುತ್ತಿದೆ. ಎತ್ತಿನಹೊಳೆ ಯೋಜನೆಗೆ ₹8 ಸಾವಿರ ಕೋಟಿ ಮಂಜೂರು ಮಾಡಿದರೂ. ಈಗ 25 ಸಾವಿರ ಕೋಟಿ ನೀಡಿದ್ದಾರೆ, ಅದು ಎಲ್ಲಿವರೆಗೆ ಬಂದಿದೆ ಗೊತ್ತಿಲ್ಲ ಎಂದು ಹೆಚ್ ಡಿ ದೇವೇಗೌಡ ತಿಳಿಸಿದರು.
Key words: fight, Irrigation, until, last breath, H.D. Deve Gowda
The post ನಾಲ್ಕೈದು ವರ್ಷ ಬದುಕಿರುತ್ತೇನೆ: ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ – ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.