15
Saturday
March, 2025

A News 365Times Venture

ಪದವಿ ಕಾಲೇಜುಗಳ ಪ್ರಾಂಶುಪಾಲರ ಖಾಲಿ ಹುದ್ದೆಗಳ ಭರ್ತಿಗೆ  ಶೀಘ್ರ ಕ್ರಮ- ಸಚಿವ ಡಾ:ಎಂ.ಸಿ.ಸುಧಾಕರ್

Date:

 

ಬೆಂಗಳೂರು, ಮಾರ್ಚ್ 13, 2025: ಉನ್ನತ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದ್ದು, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳ ಪರಿಶೀಲನೆಯ ಹಂತದಲ್ಲಿದ್ದು ಶೀಘ್ರವಾಗಿ ತಾತ್ಕಾಲಿಕ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್  ತಿಳಿಸಿದರು.

ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ  ವಿಜಯಪುರ ನಗರ ವಿಧಾನಸಭಾ ಸದಸ್ಯ ಬಸನಗೌಡ ಆರ್ ಪಾಟೀಲ್ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು,

ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಗೆ ಬರುವ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಸರ್ಕಾರಕ್ಕೆ ಸಲ್ಲಿಸಿರುವ ಅಂತಿಮ ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ (ವಿಶೇಷ) ನಿಯಮಗಳು 2020ರ ನಿಯಮ 4ರನ್ವಯ ಕಾಲೇಜು ಶಿಕ್ಷಣ ಆಯುಕ್ತರ ಅಧ್ಯಕ್ಷತೆಯಲ್ಲಿನ ಆಯ್ಕೆ ಪ್ರಾಧಿಕಾರವು ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳ ಶೈಕ್ಷಣಿಕ/ಮೀಸಲಾತಿ ದಾಖಲಾತಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದೆ. ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅರ್ಜಿಯಲ್ಲಿ ದಾಖಲಿಸಿದ್ದ ಮಾಹಿತಿಗಳಿಗನುಗುಣವಾಗಿ ವಿದ್ಯಾರ್ಹತೆ, ಮೀಸಲಾತಿ ಮತ್ತಿತರೆ ಅಗತ್ಯ ದೃಢೀಕೃತ ಪ್ರತಿಗಳನ್ನು ಸಲ್ಲಿಸುವಂತೆ ತಿಳಿಸಲಾಗಿತ್ತು. ಅದರಂತೆ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳ ಪರಿಶೀಲನೆಯ ಹಂತದಲ್ಲಿದ್ದು ಶೀಘ್ರವಾಗಿ ತಾತ್ಕಾಲಿಕ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು ಎಂದು ಉತ್ತರಿಸಿದರು.

ಪ್ರಸ್ತುತ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಆಯಾ ಕಾಲೇಜುಗಳ ಉಪನ್ಯಾಸಕರು ಸೇವಾ ಜೇಷ್ಟತೆಯಲ್ಲಿ ಹಿರಿಯರಾದವರನ್ನು ಪ್ರಾಂಶುಪಾಲರ ಪ್ರಭಾರದಲ್ಲಿ ಇರಿಸಲು ಕ್ರಮ ವಹಿಸಲಾಗಿದೆ. ಕಾಲೇಜಿನ ದೈನಂದಿನ ಆಡಳಿತ ನಿರ್ವಹಣೆಗೆ ಯಾವುದೇ ಸಮಸ್ಯೆಯಾಗಿರುವುದಿಲ್ಲ ಎಂದು ತಿಳಿಸಿದರು.

KEY WORDS:  vacant posts, Principals of Degree Colleges,  Minister Dr. M.C. Sudhakar

Quick action to fill vacant posts of Principals of Degree Colleges – Minister Dr. M.C. Sudhakar

The post ಪದವಿ ಕಾಲೇಜುಗಳ ಪ್ರಾಂಶುಪಾಲರ ಖಾಲಿ ಹುದ್ದೆಗಳ ಭರ್ತಿಗೆ  ಶೀಘ್ರ ಕ್ರಮ- ಸಚಿವ ಡಾ:ಎಂ.ಸಿ.ಸುಧಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಾ.22ಕ್ಕೆ ಕ್ಷೇತ್ರ ಪುನರ್‌ ವಿಂಗಡನೆ ವಿರೋಧಿ ಸಭೆ:  ತಮಿಳುನಾಡು ಸಿಎಂ ಸ್ಟಾಲಿನ್‌ ಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು,ಮಾರ್ಚ್,13,2025 (www.justkannada.in):  ಮಾರ್ಚ್ 22ಕ್ಕೆ ನಡೆಯುವ ಕ್ಷೇತ್ರ ಪುನರ್‌ ವಿಂಗಡನೆ...

ഫലസ്തീന്‍ അനുകൂല വിദ്യാര്‍ത്ഥി മഹ്‌മൂദ് ഖലീലിനെ മോചിപ്പിക്കണം; ട്രംപ് ടവറില്‍ പ്രതിഷേധിച്ച് ജൂത സംഘടന

ന്യൂയോര്‍ക്ക്: കൊളംബിയ സര്‍വകലാശയില്‍ ഫലസ്തീന്‍ അനുകൂല പ്രക്ഷോഭങ്ങള്‍ക്ക് നേതൃത്വം കൊടുത്ത മഹ്‌മൂദ്...

Pawan Kalyan: `ஏன் தமிழ் படங்கள் இந்தியில் டப் செய்கிறார்கள்?' – சர்ச்சையைக் கிளப்பும் பவன் கல்யாண்

தமிழகத்தில் தற்போது பரபரப்பாக பேசப்பட்டுக் கொண்டிருக்கும் இந்தி திணிப்பு விவகாரம் குறித்து...

Trump: ఉక్రేనియన్ సైనికుల ప్రాణాలను కాపాడమని విజ్ఞప్తి చేసిన ట్రంప్.. పుతిన్ ఏమన్నారంటే?

రష్యా-ఉక్రెయిన్ దేశాల మధ్య జరుగుతున్న పరస్పర దాడులు రెండో ప్రపంచ యుద్ధాన్ని...