ಬೆಂಗಳೂರು,ಮಾರ್ಚ್,19,2025 (www.justkannada.in): ಕೃಷಿ ಕಾಲೇಜು ಮತ್ತು ಇಂಜಿನಿಯರಿಂಗ್ ಕಾಲೇಜುಗಳನ್ನ ಸಚಿವರು ತಮ್ಮ ತಮ್ಮ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗುತ್ತಾರೆ. ತಮ್ಮ ತಮ್ಮ ಕ್ಷೇತ್ರವನ್ನೇ ನೋಡುತ್ತಾ ಹೋದರೆ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಎಂದು ಕಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್ ಆನಂದ್ ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಆಡಳಿತ ಪಕ್ಷದ ಶಾಸಕ ಕೆ.ಎಸ್ ಆನಂದ್, ಬಜೆಟ್ ನಲ್ಲಿ ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ. ಇಂಜಿನಿಯರಯಿಂಗ್ ಕಾಲೇಜನ್ನ ಉನ್ನತ ಶಿಕ್ಷಣ ಸಚಿವರು ತಮ್ಮ ಕ್ಷೇತ್ರ ಚಿಂತಾಮಣಿಗೆ ತೆಗೆದುಕೊಂಡು ಹೋಗುತ್ತಾರೆ. ಕೃಷಿಕಾಲೇಜನ್ನ ಕೃಷಿ ಸಚಿವರು ಮಂಡ್ಯಕ್ಷೇತ್ರಕ್ಕೆ ತೆಗೆದುಕೊಂಡು ಹೋಗುತ್ತಾರೆ. ಸಚಿವರು ಅವರವರ ಕ್ಷೇತ್ರಗಳಿಗೆ ತೆಗೆದುಕೊಂಡು ಹೋದರೇ ನಮ್ಮ ಪರಿಸ್ಥಿತಿ ಏನು..? ಎಂದು ಪ್ರಶ್ನಿಸಿದರು.
ಇದರಿಂದ ಕೆಲವೇ ಕೆಲ ಜಿಲ್ಲೆಗಳಲ್ಲಿ ಅಭಿವೃದ್ದಿ ಆಗುತ್ತೆ. ಸಿಎಂ, ಸಚಿವರು ತಮ್ಮ ತಮ್ಮ ಕ್ಷೇತ್ರವನ್ನ ನೋಡುತ್ತಾ ಹೋದರೇ ಇಡೀ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಸಿಎಂ ಸಚಿವರು ರಾಜ್ಯದ ಸಮಗ್ರ ಅಭಿವೃದ್ದಿಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
Key words: Legislative Assembly, Congress, MLA, Ministers
The post ತಮ್ಮ ತಮ್ಮ ಕ್ಷೇತ್ರವನ್ನೇ ನೋಡುತ್ತಾ ಹೋದ್ರೆ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಸಚಿವರ ವಿರುದ್ದ ‘ಕೈ’ ಶಾಸಕ ಅಸಮಾಧಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.