23
Sunday
March, 2025

A News 365Times Venture

ಬೆಂಗಳೂರು ವರ್ತುಲ ರಸ್ತೆ ಯೋಜನೆಗೆ (STRR) ಶೀಘ್ರ ಒಪ್ಪಿಗೆ: ಹೆಚ್.ಡಿಕೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ

Date:

ನವದೆಹಲಿ,ಮಾರ್ಚ್,20,2025 (www.justkannada.in): ಬೆಂಗಳೂರು ನಗರದ ವಾಹನ ದಟ್ಟಣೆಯನ್ನು ಗಣನೀಯ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಕೇಂದ್ರ ಸಂಪುಟ ಸಭೆಯ ಮುಂದೆ ಬರಲಿದೆ. ಯೋಜನೆಗೆ ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ’ ಒಪ್ಪಿಗೆ ನೀಡಿದೆ.

ಈ ಬಗ್ಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದು, ಶೀಘ್ರವೇ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದರು.

ನವದೆಹಲಿಯಲ್ಲಿ ಗುರುವಾರ ನಿತಿನ್ ಗಡ್ಕರಿ ಅವರನ್ನು ಅವರ ಸಂಸತ್ ಭವನದ ಕಚೇರಿಯಲ್ಲಿ  ಭೇಟಿಯಾದ ಸಚಿವ ಕುಮಾರಸ್ವಾಮಿ ಅವರು; ಈ ಯೋಜನೆಯ ಬಗ್ಗೆ ಮಹತ್ವದ ಚರ್ಚೆ ನಡೆಸಿದರು.

ಈ ಹಿಂದೆ ಗಡ್ಕರಿಯವರನ್ನು ಕೇಂದ್ರ ಸಚಿವ ಹೆಚ್ ಡಿಕೆ ಭೇಟಿಯಾಗಿದ್ದರು. ಕುಮಾರಸ್ವಾಮಿ ಅವರ ಮನವಿಯ ಮೇರೆಗೆ ಯೋಜನೆಗೆ ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ’ (Public Private Partnership Appraisal Committee – PPPAC) ಒಪ್ಪಿಗೆ ನೀಡಿದ್ದು, ಈಗ ಸಂಪುಟದ ಮುಂದೆ ಬರಲಿದೆ. ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ಕೊಡಿಸಲಾಗುವುದು ಎಂದು ಅವರು ಹೆಚ್ ಡಿಕೆಗೆ ತಿಳಿಸಿದರು.

ನಿತಿನ್ ಗಡ್ಕರಿ ಅವರ ಸಕರಾತ್ಮಕ ಸ್ಪಂದನೆ ಬಗ್ಗೆ ಸಂತಸ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು, ಉಪನಗರ ವರ್ತುಲ ರಸ್ತೆ ಯೋಜನೆ (Satellite Town Ring Road-STRR) 2013ರಲ್ಲಿಯೇ ಚಾಲನೆ ಪಡೆದಿತ್ತು. ಆದರೆ, ಹಲವಾರು ಕಾರಣಗಳಿಂದ ಅದು ನೆನೆಗುದಿಗೆ ಬಿದ್ದಿತ್ತು. ಬೆಂಗಳೂರು ಸುತ್ತಮುತ್ತ ಇರುವ ಎಂಟು ಕೈಗಾರಿಕಾ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ. ಈ ಯೋಜನೆಯ ಕಾರ್ಯಗತಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಅವರು ಬರೆದಿದ್ದ ಪತ್ರವನ್ನು ಗಡ್ಕರಿ ಅವರಿಗೆ ನೀಡಲಾಯಿತು ಎಂದು ಹೇಳಿದರು.

4- 6 ಪಥಗಳ ಈ ಯೋಜನೆಯು ದಾಬಸ್‌ ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಹಾಗೂ ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೈವೇಯನ್ನು ಕೂಡುತ್ತದೆ. ಜತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ. ಈ ಉಪನಗರ ವರ್ತುಲ ರಸ್ತೆಯನ್ನು ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಯ ಸಂಪರ್ಕಗೊಳಿಸಲಾಗುವುದು. ಕೈಗಾರಿಕೆಗಳಿಗೆ ಸರಕು ಸರಂಜಾಮು ಸಾಗಿಸುವ ಯಾವುದೇ ಬೃಹತ್ ವಾಹನ ಬೆಂಗಳೂರು ನಗರದೊಳಕ್ಕೆ ಪ್ರವೇಶ ಮಾಡದಂತೆ ತಡೆಯುವುದೇ ಈ ಯೋಜನೆಯ ಉದ್ದೇಶವಾಗಿದೆ ಎಂದು  ಕೇಂದ್ರ ಸಚಿವ ಹೆಚ್ ಡಿಕೆ ಹೇಳಿದರು.

2018ರಿಂದ ನೆನೆಗುದಿಗೆ ಬಿದ್ದಿದ್ದ ಉಪನಗರ ಹೊರ ವರ್ತುಲ ರಸ್ತೆ ಯೋಜನೆಗೆ ಗಡ್ಕರಿ ಅವರ ಒಪ್ಪಿಗೆ ಹಾಗೂ ಕುಮಾರಸ್ವಾಮಿ ಅವರ ಒಪ್ಪಿಗೆಯೊಂದಿಗೆ ಮೋಕ್ಷ ಸಿಕ್ಕಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಿಗೆ ಈ ಯೋಜನೆಯಿಂದ ಹೆಚ್ಚು ಲಾಭವಾಗಲಿದೆ. ಮುಖ್ಯವಾಗಿ ಬೆಂಗಳೂರು ನಗರದ ಮೇಲೆ ಸಂಚಾರದ ಒತ್ತಡ ಕಡಿಮೆ ಆಗಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ಈ ಯೋಜನೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು 135 ಕಿ.ಮೀ. ದೂರ ಹಾದು ಹೋಗಲಿದ್ದು, ಯೋಜನೆಯ ಸುಮಾರು ₹4,750 ಕೋಟಿ ವೆಚ್ಚದಲ್ಲಿ ಕಾರ್ಯಗತ ಆಗುತ್ತಿದೆ. 4 ರಿಂದ 6 ಪಥ ಹೊಂದಿರುವ ಸಂಪೂರ್ಣ ನಿಯಂತ್ರಿತ ಪ್ರವೇಶ ವ್ಯವಸ್ಥೆಯನ್ನು ಹೊಂದಿರುವ ಈ ಹೆದ್ದಾರಿಯು ಯಾವುದೇ ಅಡೆತಡೆಗಳಿಲ್ಲದೆ ಸಂಚಾರ ಸೌಲಭ್ಯ ಕಲ್ಪಿಸಲಿದೆ. ಬೆಂಗಳೂರು ಸುತ್ತಲಿನ ಉಪ ನಗರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಇದು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ ಎಂದು ಅಂದಾಜಿಸಲಾಗಿದೆ ಎಂದು  ಹೆಚ್ ಡಿಕೆ ತಿಳಿಸಿದರು.

Key words: Bangalore Circular Road Project, Union Minister, Nitin Gadkari, HDK

The post ಬೆಂಗಳೂರು ವರ್ತುಲ ರಸ್ತೆ ಯೋಜನೆಗೆ (STRR) ಶೀಘ್ರ ಒಪ್ಪಿಗೆ: ಹೆಚ್.ಡಿಕೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

IPL 2025: నేడే సన్‌రైజర్స్ Vs రాజస్థాన్ రాయల్స్ మధ్య పోరు.. మ్యా్చ్ కు సర్వం సిద్ధం

హైదరాబాద్ క్రికెట్ లవర్స్ ఈగర్ గా వెయిట్ చేస్తున్న తరణం రానే...

ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ: ಆರೋಪಿ ಕಾಲಿಗೆ ಗುಂಡೇಟು

  ಮೈಸೂರು,ಮಾರ್ಚ್,22,2025 (www.justkannada.in):  ಸ್ಥಳ ಮಹಜರು ವೇಳೆ  ಪೊಲೀಸರ ಮೇಲೆಯೇ ಹಲ್ಲೆ...

ശിശുക്ഷേമസമിതിയിലെ കുഞ്ഞിന്റെ മരണം; ന്യുമോണിയയെന്ന് പോസ്റ്റ്‌മോര്‍ട്ടം റിപ്പോര്‍ട്ട്

തിരുവനന്തപുരം: തിരുവനന്തപുരത്തെ ശിശുസംരക്ഷണ സമിതിയില്‍ വെച്ച് മരണപ്പെട്ട അഞ്ചരമാസം പ്രായമുള്ള കുഞ്ഞിന്റെ...

Fair Delimitation: "சொந்த நாட்டில் அரசியல் அதிகாரத்தை இழக்கும் சூழ்நிலை" – முதல்வர் ஸ்டாலின்

மத்திய அரசின், மக்கள் தொகை அடிப்படையிலான தொகுதி மறுவரையறைக்கு எதிர்ப்பு தெரிவித்து...