ನವದೆಹಲಿ,ಮಾರ್ಚ್,24,2025 (www.justkannada.in): ಮುಸ್ಲೀಮರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಈ ವಿಚಾರವಾಗಿ ಇಂದು ರಾಜ್ಯಸಭೆಯಲ್ಲಿ ಗದ್ದಲ ಉಂಟಾಯಿತು.
ಕರ್ನಾಟಕದಲ್ಲಿ ಗುತ್ತಿಗೆಯಲ್ಲಿ ಮುಸ್ಲೀಮರಿಗೆ 4% ಮೀಸಲಾತಿ ನೀಡಿರುವ ಮಸೂದೆ ಅಂಗೀಕರಿಸಿರುವ ವಿಚಾರ ಕುರಿತು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಕೇಂದ್ರ ಸಚಿವ ಜೆ.ಪಿ ನಡ್ಡಾ, ಕರ್ನಾಟಕದಲ್ಲಿ ಸಂವಿಧಾನ ಉಲ್ಲಂಘಿಸಿ ಮಸೂದೆ ಜಾರಿ ಮಾಡಿದ್ದಾರೆ ಸಂವಿಧಣಾ ಬದಲಿಸುತ್ತೇವೆ ಅಂತ ಡಿಕೆ ಶಿವಕುಮಾರ್ ಹೇಳಿದ್ದಾರೆ ಎಂದರು.
ಈ ವೇಳೆ ಜೆಪಿ ನಡ್ಡಾ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮಲ್ಲಿಕಾರ್ಜುನ ಖರ್ಗೆ, ಸಂವಿಧಾನವನ್ನ ಯಾರೂ ಬದಲಿಸಲು ಸಾಧ್ಯವಿಲ್ಲ. ಅಂದು ಸಂವಿಧಾನ ಬದಲಿಸಲಾಗುವುದು ಎಂದಿದ್ದವರು ಇಂದು ಅವರೇ ಇಲ್ಲಿ ಗಲಾಟೆ ಮಾಡುತ್ತಿದ್ದಾರೆ ಅಂಬೇಡ್ಕರ್ ನೀಡಿರುವ ಮೀಸಲಾತಿ ಬದಲಿಸಲು ಸಾಧ್ಯವಿಲ್ಲ. ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮಾಡಿತ್ತು. ಬಿಜೆಪಿ ಭಾರತ್ ಥೋಡೋ ಮಾಡುತ್ತಿದೆ ಎಂದು ಕಿಡಿಕಾರಿದರು.
ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಆಡಳಿತ ಪಕ್ಷಗಳ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಮಾತಿನ ಚಕಮಕಿ ವಾಗ್ವಾದ ನಡೆದು ಗದ್ದಲ ಉಂಟಾಯಿತು.
Key words: Muslim reservation, BJP members, outrage, Rajya Sabha
The post ಮುಸ್ಲೀಂ ಮೀಸಲಾತಿ, ಸಂವಿಧಾನ ಬದಲಾವಣೆ ಹೇಳಿಕೆ: ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ, ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.