ಬೆಂಗಳೂರು,ಮಾರ್ಚ್,29,2025 (www.justkannada.in): ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಹೆಚ್.ಸಿ ಮಹದೇವಪ್ಪ, ಸಚಿವ ಸಂಪುಟ ಪುನರಚನೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಹೈಕಮಾಂಡ್ ಗೆ ತೀರ್ಮಾನ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ ಎಂದಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಮತ್ತು ಹೆಚ್.ಸಿ ಮಹದೇವಪ್ಪ ಭೇಟಿ, ಚರ್ಚೆ
ಇನ್ನು ನವ ದೆಹಲಿಯಿಂದ ಪ್ರವಾಸದಿಂದ ವಾಪಸ್ಸಾದ ಬಳಿಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂದು ಸಮಾಜಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಅವರ ಭೇಟಿ ಅದರಲ್ಲೂ ದೆಹಲಿಯಿಂದ ವಾಪಸ್ಸಾದ ಬಳಿಕ ಪರಸ್ಪರ ಭೇಟಿಯಾಗಿರುವುದು ತೀವ್ರ ಕುತೂಹಲ ಕೆರಳಿಸಿದೆ.
Key words: Cabinet, KPCC President, change, Minister, H.C. Mahadevappa
The post ಸಂಪುಟ ಪುನರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ: ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದು ಹೀಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.