ಬೆಂಗಳೂರು,ಮಾರ್ಚ್,29,2025 (www.justkannada.in): ಬೈಕ್’ಗೆ ಬಿಬಿಎಂಪಿಯ ಕಸದ ಲಾರಿ ಡಿಕ್ಕಿಯಾಗಿ 10 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ನಡೆದಿದ್ದು ಸಾರ್ವಜನಿಕರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಥಣಿಸಂದ್ರ ರೈಲ್ಚೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. 10 ವರ್ಷದ ಐಮಾನ್ ಮೃತ ಬಾಲಕ. ಐಮಾನ್ ಅಪ್ಪನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ನಂತರ ರೊಚ್ಚಿಗೆದ್ದ ಸಾರ್ವಜನಿಕರು ಕಸದ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಕಿ ಹಚ್ಚುತ್ತಿದ್ದಂತೆ ಕೂಡಲೇ ಚಾಲಕ ಲಾರಿಯಿಂದ ಕೆಳಗಿಳಿದಿದ್ದಾನೆ. ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Key words: bike BBMP lorry, collides, Boy, dies
The post ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕ ಸಾವು: ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.