ಬೆಂಗಳೂರು,ಮಾರ್ಚ್,31,2025 (www.justkannada.in): ಎಂಎಲ್ ಸಿ ರಾಜೇಂದ್ರ ಹತ್ಯೆಗೆ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಡೀಯೋ ವೈರಲ್ ಆಗುತ್ತಿದ್ದಂತೆ ಇದೀಗ ಸೋಮನ ಆಪ್ತೆ ಪುಷ್ಪಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಎಂಎಲ್ ಸಿ ರಾಜೇಂದ್ರ ರಾಜಣ್ಣ ಹತ್ಯೆಗೆ ಸುಪಾರಿ ನೀಡಿದ ವಿಚಾರದ ಬಗ್ಗೆ ಆಡಿಯೋನಲ್ಲಿ ಕೇಳಿಬಂದಿರುವ ಪುಷ್ಪಾ ಎಂಬ ಮಹಿಳೆ ಸ್ಪೋಟಕ ಮಾಹಿತಿ ಹಂಚಿಕೊಂಡಿರುವುದು ಬಯಲಾಗಿದೆ. ಕಳೆದ ನವೆಂಬರ್ ನಲ್ಲಿ ರಾಜೇಂದ್ರ ಅವರ ಮಗಳ ಹುಟ್ಟುಹಬ್ಬದ ಡೆಕೋರೇಷನ್ ಗೆ ಜೈಪುರದ ಇಬ್ಬರು ಹುಡುಗರು ಬಂದಿದ್ದರು. ಆ ಇಬ್ಬರನ್ನೂ ಸೋಮ ಕಳುಹಿಸಿದ್ದ, ಆಗಲೇ ಹತ್ಯೆಗೆ ಯತ್ನ ನಡೆದಿತ್ತು ಎಂದು ಆಡಿಯೋನಲ್ಲಿ ಪುಷ್ಪಾ ಮಾಹಿತಿ ನೀಡಿದ್ದರು ಎನ್ನಲಾಗಿದೆ.
ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ, ವಿಧಾನಪರಿಷತ್ ಸದಸ್ಯ ಆರ್. ರಾಜೇಂದ್ರ ಕೊಲೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಸೋಮ, ಭರತ್, ಅಮಿತ್, ಗುಂಡ, ಯತೀಶ್ ಎಂಬುವರ ವಿರುದ್ಧ ಕೇಸು ದಾಖಲಿಸಿಕೊಳ್ಳಲಾಗಿದೆ.
Key words: Alleged, murder, MLC, Rajendra, audio, woman, arrest, police
The post MLC ರಾಜೇಂದ್ರ’ ಹತ್ಯೆಗೆ ಸಂಚು ಆರೋಪ, ಆಡೀಯೋ ವೈರಲ್: ಓರ್ವ ಮಹಿಳೆ ಪೊಲೀಸ್ ವಶಕ್ಕೆ.! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.