ಬೆಂಗಳೂರು, ಏಪ್ರಿಲ್, 8, 2025 (www.justkannada.in): 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಶೇ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಉಡುಪಿ ಜಿಲ್ಲೆ 93.90 ಶೇಕಾಡ ಫಲಿತಾಂಶ ಪಡೆದು ಮೊದಲ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆ 93.57, ಬೆಂಗಳೂರು ದಕ್ಷಿಣ 85.36, ಕೊಡಗು ಜಿಲ್ಲೆ 83.84ರಷ್ಟು ಫಲಿತಾಂಶ, ಬೆಂಗಳೂರು ಉತ್ತರ 83.31, ಉತ್ತರ ಕನ್ನಡ ಜಿಲ್ಲೆ 82.93ರಷ್ಟು ಫಲಿತಾಂಶ ಬಂದಿದೆ. ಯಾದಗಿರಿ ಜಿಲ್ಲೆಯು ಶೇ.48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ.
6,37,805 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಶೇಕಡಾ 53.29ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07ರಷ್ಟು ಹಾಗೂ ವಿಜ್ಞಾನ ವಿಭಾಗದಲ್ಲಿ ಶೇಕಡಾ 82.54ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ರಾಜ್ಯಕ್ಕೆ ಟಾಪರ್ಸ್ ಇವರೇ ನೋಡಿ..
ದಕ್ಷಿಣ ಕನ್ನಡದ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 599 ಅಂಕ ಗಳಿಸಿ ಮೊದಲ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ 600 ಕ್ಕೆ 599 ಅಂಕಗಳನ್ನು ಪಡೆದು ಮೊದಲ ಸ್ಥಾನದಲ್ಲಿದ್ದು ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದಾರೆ.
ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು, 600 ಕ್ಕೆ 597 ಅಂಕ ಪಡೆದಿದ್ದಾರೆ.
ಜಿಲ್ಲೆವಾರು ಫಲಿತಾಂಶ ಹೀಗಿದೆ..
1. ಉಡುಪಿ 93.90
2. ದ.ಕನ್ನಡ 93.57
3. ಬೆಂಗಳೂರು ದಕ್ಷಿಣ 85.36
4. ಕೊಡಗು 83.84
5. ಬೆಂಗಳೂರು ಉತ್ತರ 83.31
6. ಉತ್ತರ ಕನ್ನಡ 82.93
7. ಶಿವಮೊಗ್ಗ 79.91
8. ಬೆಂಗಳೂರು ಗ್ರಾ. 79.70
9. ಚಿಕ್ಕಮಗಳೂರು 79.56
10. ಹಾಸನ 77.56
11. ಚಿಕ್ಕಬಳ್ಳಾಪುರ 75.80
12. ಮೈಸೂರು 74.30
13. ಚಾಮರಾಜನಗರ 73.97
14. ಮಂಡ್ಯ 73.27
15. ಬಾಗಲಕೋಟೆ 72.83
16. ಕೋಲಾರ 72.45
17. ಧಾರವಾಡ 72.32
18. ತುಮಕೂರು 72.02
19. ರಾಮನಗರ 69.71
20. ದಾವಣಗೆರೆ 69.45
21. ಹಾವೇರಿ 67.56
22. ಬೀದರ್ 67.31
23. ಕೊಪ್ಪಳ 67.20
24. ಚಿಕ್ಕೋಡಿ 66.76
25. ಗದಗ 66.64
26. ಬೆಳಗಾವಿ 65.37
27. ಬಳ್ಳಾರಿ 64.41
28. ಚಿತ್ರದುರ್ಗ 59.87
29. ವಿಜಯಪುರ 58.81
30. ರಾಯಚೂರು 58.75
31. ಕಲಬುರುಗಿ 55.70
32. ಯಾದಗಿರಿ 48.45
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಪಿಯುಸಿ ಫಲಿತಾಂಶವನ್ನು karresults.nic.inನಲ್ಲಿ ಮಧ್ಯಾಹ್ನ 1.30ರ ಬಳಿಕ ವೀಕ್ಷಿಸಬಹುದು.
Key words: Secondary PUC, Result, 73.45 % Students, Passed
The post ದ್ವಿತೀಯ ಪಿಯುಸಿ ಫಲಿತಾಂಶ: ಶೇ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ: ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.