ಬೆಂಗಳೂರು,ಏಪ್ರಿಲ್,12,2025 (www.justkannada.in): ಬೆಂಗಳೂರು ಕರಗ ಮಹೋತ್ಸವಕ್ಕೆ ಅನುದಾನದ ಕೊರತೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.
ಕರಗ ಮಹೋತ್ಸವಕ್ಕೆ ಸರ್ಕಾರದಿಂದ ಹಣ ಬಿಡುಗಡೆ ಮಾಡಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿ ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗರೆಡ್ಡಿ, ಕರಗ ಮಹೋತ್ಸವಕ್ಕೆ ಪ್ರತಿ ವರ್ಷ ಬೆಂಗಳೂರು ಮಹಾನಗರ ಪಾಲಿಕೆ ಹಣ ಬಿಡುಗಡೆ ಮಾಡುತ್ತದೆ. ಅನುದಾನದ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಹೆಚ್ಚುವರಿ ಹಣ ಖರ್ಚು ಮಾಡಿದರೂ ಸಹ ಹಣ ಬಿಡುಗಡೆ ಮಾಡುತ್ತೇವೆ ಎಂದರು.
ಹಾಲಿ ಆಡಳಿತ ಮಂಡಳಿ ಅವಧಿ ಮುಗಿದಿದೆ. ಆದರೆ ಕಾರ್ಯಕ್ರಮ ಮುಗಿಯುವವರೆಗೂ ಮುಂದುವರೆಯುವಂತೆ ಹೈಕೋರ್ಟ್ ಆದೇಶಿಸಿದೆ. ಆದರೆ ಹಣಕಾಸಿನ ವ್ಯವಹಾರ ಮಾಡಲು ಸಮಿತಿಗೆ ಅವಕಾಶವಿಲ್ಲ. ಅಧಿಕಾರಿಗಳೇ ಖರ್ಚು ವೆಚ್ಚ ನೋಡಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ನಿನ್ನೆ ಸರ್ಕಾರದಿಂದ ಹೆಚ್ಚುವರಿ ಡಿಸಿಗೆ ಹಣ ನೀಡಲಾಗಿದೆ. ಅವರೇ ಖರ್ಚು ಮಾಡುತ್ತಾರೆ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
Key words: no shortage, funds, Bangalore Karaga Mahotsav, Minister, Ramalingareddy
The post ಬೆಂಗಳೂರು ಕರಗ ಮಹೋತ್ಸವಕ್ಕೆ ಅನುದಾನದ ಕೊರತೆ ಇಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.