ಬೆಂಗಳೂರು, ಏಪ್ರಿಲ್ ,14,2025 (www.justkannada.in): ಹುಬ್ಬಳ್ಳಿಯ ರಾಯನಾಳ ಸಮೀಪ ಬಿಹಾರ ಮೂಲದ ರಿತೇಶ್ ಕುಮಾರ್ ಎಂಬಾತ 5 ವರ್ಷದ ಬಾಲಕಿಯನ್ನು ಕೊಲೆ ಮಾಡಿ ನಂತರ ಪೊಲೀಸರ ಗುಂಡಿಗೆ ಬಲಿಯಾದ ವಿಚಾರ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ಹೊರ ರಾಜ್ಯಗಳಿಂದ ಬಂದವರಿಂದಲೇ ರಾಜ್ಯದಲ್ಲಿ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಪರಮೇಶ್ವರ್, ಬೆಂಗಳೂರಿಗೆ ಹೊರರಾಜ್ಯಗಳಿಂದ ಸಾಕಷ್ಟು ಜನ ಬರುತ್ತಾರೆ. ಹೀಗೆ ಹೊರಗಿನಿಂದ ಬಂದವರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲ್ಲ. ಇಲ್ಲಿನ ಜನರ ಭಾವನೆ ಅರ್ಥ ಮಾಡಿಕೊಳ್ಳದೆ ಈ ರೀತಿ ವರ್ತಿಸುತ್ತಾರೆ. ಹೊರರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ ಎಂದರು.
ಹೆಚ್ಚು ಕಡೆಗಳಲ್ಲಿ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುವುದು ಕಂಡುಬರುತ್ತಿದೆ. ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಸಭೆ ನಡೆಸುತ್ತೇವೆ. ಕಾರ್ಮಿಕ ಇಲಾಖೆ ಜೊತೆ ನಾವು ಜಂಟಿಯಾಗಿ ಸಭೆ ನಡೆಸಿ ಚರ್ಚಿಸುತ್ತೇವೆ ಎಂದರು.
Key words: Most crimes, other states, people, Home Minister, G. Parameshwar
The post ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ: ಗೃಹ ಸಚಿವ ಜಿ. ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.