ಬೆಂಗಳೂರು,ಏಪ್ರಿಲ್,14,2025 (www.justkannada.in): ಕನ್ನಡ ಚಿತ್ರರಂಗದ ಹಿರಿಯ ಖ್ಯಾತ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಇಂದು ನಿಧನರಾಗಿದ್ದಾರೆ.
ಇಂದು ರಾತ್ರಿ 2.30ರ ಸುಮಾರಿಗೆ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಬ್ಯಾಂಕ್ ಜನಾರ್ಧನ್ ಅವರ ಪಾರ್ಥೀವ ಶರೀರವನ್ನ ಮಣಿಪಾಲ್ ಆಸ್ಪತ್ರೆಯಿಂದ ಸುಲ್ತಾನ್ ಪಾಳ್ಯದಲ್ಲಿರುವ ಅವರ ನಿವಾಸಕ್ಕೆ ಶಿಫ್ಟ್ ಮಾಡಲಾಗಿದೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರದ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ
ಬ್ಯಾಂಕ್ ಜನಾರ್ಧನ್ ಅವರು1949ರಲ್ಲಿ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್..’, ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ ಅವರು ನಟಿಸಿದ್ದರು.
Key words: Kannada, Actor, Bank Janardhan, passes away
The post ಕನ್ನಡ ಖ್ಯಾತ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ನಿಧನ: ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.